ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ. 13. ಕೈದಿಯೋರ್ವ ಕಾರಾಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.

 

ಮೃತಪಟ್ಟವರನ್ನು ಸೋಮಿನಕೊಪ್ಪ ನಿವಾಸಿ ಸೈಯದ್ ಅಬು ಸಲೇಹ್ (35) ಎಂದು ಗುರುತಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿದ್ದ ಈತನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

 

Also Read  ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

.

 

error: Content is protected !!