(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದಾಗಿ ಡಿ.16ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ಕೋಸ್ಟ್ ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಎಚ್ಚರಿಕೆ ನೀಡಿದ್ದಾರೆ.
ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ➤ ಮೀನುಗಾರಿಕಾ ದೋಣಿಗಳು ದಡ ಸೇರುವಂತೆ ಸೂಚನೆ
