ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.

ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ ಸುನೀಲ್ ಕುಮಾರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರವಾಗಿ ಪೆಟ್ಟಾಗಿ ಸುನೀಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Also Read  ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ

ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

error: Content is protected !!
Scroll to Top