ಬಂಟ್ವಾಳ: ಮನೆಯ ಹಿಂಬಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ➤ 12.40 ಲಕ್ಷ ರೂ. ಮೌಲ್ಯದ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 14. ಸಜಿಪನಡು ಗ್ರಾಮದ ನಿಶಾಭಾಗ್ ನ ನಜೀಬ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಸುಮಾರು ಒಟ್ಟು 12.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಘಟನೆ ಮಂಗಳವಾರದಂದು ನಡೆದಿದೆ.

ಮನೆಯವರು ಡಿ. 13 ರಂದು ಮಧ್ಯಾಹ್ನ 2.30ರ ಸಮಯಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದು, ರಾತ್ರಿ 8.10 ರ ಸುಮಾರಿಗೆ ಹಿಂದಿರುಗಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಜೀಬ್ ಅವರ ತಾಯಿ ಮಲಗುವ ಕೋಣೆಯ ಕಪಾಟಿನ ಸೇಫ್ ಲಾಕರನ್ನು ಆಯುಧದಿಂದ ಮೀಟಿ ತೆಗೆದ ಕಳ್ಳರು, ಪರ್ಸ್ ನಲ್ಲಿದ್ದ 1.40 ಲಕ್ಷ ರೂ. ನಗದು, 3 ಪವನ್ ತೂಕದ 3 ಕೈ ಬಳೆಗಳು, ತಲಾ ಒಂದು ಪವನ್ ತೂಕದ 3 ಉಂಗುರಗಳು, 7 ಪವನ್ ತೂಕದ ಚಿನ್ನದ ಚೈನ್, ನಜೀಬ್ ಅವರ ಕೋಣೆಯ ಕಪಾಟಿನಲ್ಲಿದ್ದ ಸೇಫ್ ಲಾಕರ್ ಮುರಿದು 4 ಪವನ್ ತೂಕದ ಕೊರಳಿನ ಮಾಲೆ, 4 ಪವನ್ ತೂಕದ ಕೈ ಬಳೆ ಸಹಿತ ಇತರ ಚಿನ್ನಾಭರಣ ಸೇರಿ ಒಟ್ಟು 36 ಪವನ್ ತೂಕದ ಚಿನ್ನಾಭರಣ ಕಳವು ನಡೆಸಿದ್ದಾರೆ ಎನ್ನಲಾಗಿದೆ. ಕಳ್ಳರು ಮನೆಯ ಮೇಲಿನ ಮಹಡಿಯ ಹಿಂಬದಿಯ ಬಾಗಿಲನ್ನು ಮುರಿದು ಒಳ ನುಗ್ಗಿದ್ದು, ಕಳವಾದ ಚಿನ್ನದ ಮೌಲ್ಯದ 11 ಲಕ್ಷ ರೂ., 1.40 ಲಕ್ಷ ರೂ. ನಗದು ಸೇರಿ ಒಟ್ಟು 12.40 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕರಾವಳಿ: ಮತದಾನ ಕೇಂದ್ರಗಳಲ್ಲಿ ಯಕ್ಷಗಾನ, ಕಂಬಳದ ಸೊಗಸು          

error: Content is protected !!
Scroll to Top