2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 14. ಸಹಪಾಠಿಗಳ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಉ.ಪ್ರ. ಫಿರೋಜಾಬಾದ್ ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಏಳರ ಹರೆಯದ ಶಿವಂ ಎಂದು ಗುರುತಿಸಲಾಗಿದೆ. ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, ಈ ಸಂದರ್ಭ ಇತರ ವಿದ್ಯಾರ್ಥಿಗಳು ಶಿವಂ ಎದೆಯ ಮೇಲೆ ಹಾರಿದ್ದಾರೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಶಾಲಾ ಆಡಳಿತ ಮಂಡಳಿಯನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ

error: Content is protected !!
Scroll to Top