ಸ್ಯಾಂಡಲ್ ವುಡ್ ನಟಿ ‘ಅಭಿನಯ’ ಅವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskdaba.com ಬೆಂಗಳೂರು, ಡಿ. 14. ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯ ಅವರಿಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಇವರು ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆಯಿಟ್ಟು ಕಿರುಕುಳ ನೀಡಿದ ಆರೋಪದಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ನಟಿ ಅಭಿನಯ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸುತ್ತಿದ್ದು, 1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ `ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. 2002 ರಲ್ಲಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿ ಅವರು ಚಂದ್ರಾಲೇಔಟ್ ಠಾಣೆಗೆ ದೂರು ದಾಖಲಿಸಿದ್ದರು. ಬಳಿಕ ವಿಚಾರಣೆ ನಡೆಸಿದ ಪೊಲೀಸರು ಚಾರ್ಜ್​ಶೀಟ್​ ಆಧರಿಸಿ, ಮ್ಯಾಜಿಸ್ಟ್ರೇಟ್ ಕೋರ್ಟ್ ಎಲ್ಲಾ ಐವರು ಆರೋಪಿಗಳಿಗೂ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗೂ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

Also Read  ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

error: Content is protected !!
Scroll to Top