ಮಂಗಳೂರು: ಗಂಭೀರಾವಸ್ಥೆಯಲ್ಲಿದ್ದ ಶಂಕಿತ ಉಗ್ರ ಶಾರೀಕ್ ಆರೋಗ್ಯದಲ್ಲಿ ಚೇತರಿಕೆ ➤ ತನಿಖೆ ಚುರುಕುಗೊಳಿಸಿದ ಎನ್ಐಎ

(ನ್ಯೂಸ್ ಕಡಬ) newskdaba.com  ಮಂಗಳೂರು, ಡಿ. 14. ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಬಹುತೇಕ ಚೇತರಿಸಿಕೊಂಡಿದ್ದು ಆತನನ್ನು ಎನ್‌ಐಎ ತಂಡ ತೀವ್ರ ವಿಚಾರಣೆಗೊಳಪಡಿಸಿದೆ.

ಘಟನೆಯಿಂದಾಗಿ ಶಾರೀಕ್ನ ಶ್ವಾಸಕೋಶದೊಳಗೆ ಹೊಗೆ ತುಂಬಿ, ಆರೋಗ್ಯ ಹದಗೆಟ್ಟಿತ್ತು. ಅಲ್ಲದೇ ಆತನ ಕಣ್ಣಿಗೂ ಹಾನಿಯಾಗಿ, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದರಿಂದ ಆತನನ್ನು ತನಿಖಾ ತಂಡವು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಆತ ಚೇತರಿಸಿಕೊಂಡಿರುವುದರಿಂದ ಎನ್‌ಐಎ ತಂಡವು ತನಿಖೆಯನ್ನು ಚುರುಕುಗೊಳಿಸಿದ್ದು ಸ್ಪೋಟದ ಹಿಂದಿನ ಆತನ ಉದ್ದೇಶ ಹಾಗೂ ಅದರ ಹಿಂದಿರುವ ಶಕ್ತಿಗಳನ್ನು ಹೊರಗೆಡಹಲಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡಾ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

 

Scroll to Top