ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ 18 ವಿದ್ಯಾರ್ಥಿಗಳು ಡಿಬಾರ್- ಪರೀಕ್ಷೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಬಂಟ್ವಾಳಡಿ. 13. ವಿಟ್ಲದ ಖಾಸಗಿ ಪದವಿಪೂರ್ವ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳ ನಡುವಿನ ಪ್ರೇಮ ಪ್ರಕರಣ ವಿಚಾರಕ್ಕೆ ಸಂಬಂಧಿಸಿ ಅಮಾನತು ಮಾಡಲಾಗಿದ್ದ 18 ವಿದ್ಯಾರ್ಥಿಗಳ ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡುವೆ ಮಾತುಕತೆ ನಡೆಸಿ, ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.

ಕೆಲವು ಸಮಯದಿಂದ ಅನ್ಯಕೋಮಿನ ವಿದ್ಯಾರ್ಥಿಗಳ ನಡುವೆ ಪ್ರೇಮ ಪ್ರಕರಣವಿದ್ದು, ಇದನ್ನರಿತ ಕಾಲೇಜು ಆಡಳಿತ ಮಂಡಳಿಯು ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಬಳಿಕ ಕೆಲವು ಸಮಯ ಯಾವುದೇ ಗೊಂದಲವಿಲ್ಲದೇ ಇದ್ದು, ಇದೀಗ ಕಾಲೇಜು ವಾರ್ಷಿಕೋತ್ಸವದ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ವಿಷಯ ತಿಳಿದ ಉಪನ್ಯಾಸಕರ ತಂಡವು ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದು, ಈ ಸಂದರ್ಭ ಹಿಂದು ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಆ ದಿನ ಯುವಕ ಕಾಲೇಜಿಗೆ ಬಾರದೇ ಇದ್ದುದರಿಂದ ಯುವತಿಯ ಪೋಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಲಾಗಿತ್ತು. ಇನ್ನೊಂದು ಕಡೆ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆಯೇ ಕೆಲವು ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದಕ್ಕೆ ಸಂಬಂಧಿಸಿ ಗುಂಪು ಕಟ್ಟಿಕೊಂಡು ಪ್ರಶ್ನಿಸಲು ಹೋದ ಭಿನ್ನ ಕೋಮಿನ 18 ವಿದ್ಯಾರ್ಥಿಗಳ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Also Read  ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ

error: Content is protected !!
Scroll to Top