ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ

(ನ್ಯೂಸ್‌ ಕಡಬ) newskadaba.com , ಡಿ. 14 ನವದೆಹಲಿ: ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ನಡೆದಿದೆ. ಆಸಿಡ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

error: Content is protected !!
Scroll to Top