‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14.  ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದ್ದು, ಇದೀಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ರಾಜೇಂದ್ರ ಸಿಂಗ್​ ಬಾಬು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ. ಇನ್ನು 1990ರಲ್ಲಿ ‘ಬಣ್ಣದ ಗೆಜ್ಜೆ’ ಚಿತ್ರ ಬಿಡುಗಡೆ ಆಗಿದ್ದು, ಆ ಸಿನಿಮಾಗೆ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹಾಡು ಇದ್ದು, ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್​ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ.

Also Read  ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ

error: Content is protected !!
Scroll to Top