ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

 

error: Content is protected !!
Scroll to Top