ಆದೇಶ ಪಾಲನೆಗೆ ವಿಫಲವಾದ ರಾಜ್ಯ ಸರಕಾರ ➤ ದಂಡ ವಿಧಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಒಬಿಸಿ ಸಮುದಾಯಕ್ಕೆ ಮೀಸಲಾತಿ ನಿಗದಿ ಹಾಗೂ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ಮಹತ್ವದ ಆದೇಶ ಹೊರಡಿಸಿದೆ.

ನ್ಯಾಯಾಲಯದ ಹಿಂದಿನ ಆದೇಶಗಳನ್ನು ರಾಜ್ಯ ಸರ್ಕಾರ ಪಾಲನೆ ಮಾಡಿಲ್ಲ ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು, ಫೆ. 1ರ ಒಳಗೆ ಒಬಿಸಿ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ ವಿಂಗಡಣೆಯನ್ನು ಪೂರ್ಣಗೊಳಿಸಲು ಆದೇಶ ನೀಡಿ ಫೆ. 2ಕ್ಕೆ ಮುಂದೂಡಿಕೆ ಮಾಡಿದೆ. ಜನವರಿ 28ರ ಒಳಗೆ ದಂಡದ ಮೊತ್ತದ ಪೈಕಿ 2 ಲಕ್ಷ ರೂಪಾಯಿಯನ್ನು ಕರ್ನಾಟಕ ಕಾನೂನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮತ್ತೆ 2 ಲಕ್ಷ ರೂಪಾಯಿಯನ್ನು ಬೆಂಗಳೂರು ವಕೀಲರ ಸಂಘ ಮತ್ತು 1 ಲಕ್ಷ ರೂಪಾಯಿಯನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

Also Read  ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ➤ ಸಿಎಂ ಬೊಮ್ಮಾಯಿ

error: Content is protected !!
Scroll to Top