(ನ್ಯೂಸ್ ಕಡಬ) newskadaba.com ಕಾರ್ಕಳ ,ಡಿ.14 :ಮನೆಯ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ನೆಲ್ಲಿಗುರಿಯಲ್ಲಿ ಸಂಭವಿಸಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಮಾಜಿ ಸುಪ್ರೀತ್ ಶೆಟ್ಟಿ ಕೆದಿಂಜೆ ಸ್ಥಳಕ್ಕೆ ಭೇಟಿ ನೀಡಿ ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಸಿಎಫ್ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ಮೇಲಕ್ಕೆತ್ತಲಾಯಿತು.














