ಕಾರು ಅಪಘಾತ ➤ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಲಂಡನ್, ಡಿ. 14. ಕಾರು ಅಪಘಾತಕ್ಕೊಳಗಾಗಿ ಇಂಗ್ಲೆಂಡ್‌ ಕ್ರಿಕೆಟ್ ತಂಡದ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಅವರು ಗಾಯಗೊಂಡ ಘಟನೆ ವರದಿಯಾಗಿದೆ.

ಬಿಬಿಸಿಯ “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಆಂಡ್ರ್ಯೂ ಕುಳಿತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂಡಲೇ ಸೆಟ್‌ನಲ್ಲಿದ್ದ ವೈದ್ಯಕೀಯ ತಂಡವು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಬಿಬಿಸಿ ತಿಳಿಸಿರುವುದಾಗಿ ವರದಿಯಾಗಿದೆ. 124 ಎಂಪಿಎಚ್ ವೇಗದಲ್ಲಿ ಅವರು ಕಾರನ್ನು ಚಾಲನೆ ಮಾಡುತ್ತಿದ್ದರು. ಇದರಿಂದ ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆನ್ನಲಾಗಿದೆ.

error: Content is protected !!
Scroll to Top