ಡಿ.15ರ ವರೆಗೆ ಭಾರೀ ಮಳೆ ಸಾಧ್ಯತೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಡಿ.14.  ಚಂಡಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿಯಲ್ಲಿ ಮಳೆ ಮುಂದುವರಿದಿದೆ. ಡಿ.15ರವರೆಗೂ ಹೀಗೇ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಇನ್ನು ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್‌ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

Also Read  ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ !

error: Content is protected !!
Scroll to Top