ಜೆಡಿಎಸ್ ಗೆ ಬಿಗ್ ಶಾಕ್ ➤ ಶೀಘ್ರವೇ ಕಾಂಗ್ರೆಸ್ ಸೇರಲಿರುವ YSV ದತ್ತ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 14. ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಶೀಘ್ರವೇ ಕಾಂಗ್ರೆಸ್ ಗೆ ಸೇರುವುದಾಗಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ರಾಜೀನಾಮೆ ನೀಡಿ, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತ ಅವರು, ಡಿ. 15ರಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತುಕತೆ ನಡೆಸಿ, ಬಳಿಕ ಡಿ.17 ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Also Read  ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ

error: Content is protected !!
Scroll to Top