ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು             

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 14. ಕ್ಯಾಂಟರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸೇರಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

ಮೃತರನ್ನು ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ(25) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

 

 

Scroll to Top