ನೇಣು ಬಿಗಿದು ಯುವಕನೋರ್ವ ಮೃತ್ಯು !!!!                           

(ನ್ಯೂಸ್ ಕಡಬ) newskadaba.com  ಕೊಣಾಜೆ, ಡಿ.14  ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಎಂಬಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಅಸೈಗೋಳಿ ನಿವಾಸಿ ಅಭಿಲಾಷ್ (36) ಎಂದು ಗುರುತಿಸಲಾಗಿದೆ.

ಮನೆ ಮಂದಿ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಮನೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.

 

 

 

 

 

Scroll to Top