ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಳ್ಳತನ     ➤ ಪರಾರಿಯಾಗಿದ್ದ ಆರೋಪಿಯ ಬಂಧನ     

(ನ್ಯೂಸ್ ಕಡಬ) newskadaba.com   ವಿಟ್ಲ, ಡಿ.15  ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿರಾಗಿದ್ದಾರೆಂದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ಪುತ್ತೂರಿನಿಂದ ಬಂದು ಮಿತ್ತೂರಿನಲ್ಲಿ ಬಸ್ಸಿನಿಂದ ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಸರ ಎಳೆದುಕೊಂಡು ಪರಾರಿಯಾಗಿದ್ದ ಎನ್ನಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Scroll to Top