ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 15. ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಬಾಗಕ್ಕೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದು, ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಕಬಕ- ವಿಟ್ಲ ರಸ್ತೆಯಲ್ಲಿ ನಡೆದಿದೆ.

ಕಬಕ ವಿಟ್ಲ ರಸ್ತೆಯ ಮಧ್ಯೆ ಲಾರಿಯೊಂದನ್ನು ನಿಲ್ಲಿಸಲಾಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಸ್ಕೂಟರ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top