ಕೋಡಿಂಬಾಳ: ‘ನಮ್ಮ ಕ್ಲಿನಿಕ್’ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಗ್ರಾಮಾಂತರ ಮಟ್ಟದಲ್ಲಿ ಜನಸಾಮಾನ್ಯರಿಗೂ ಅತ್ಯಂತ ಸುಲಭದಲ್ಲಿ ಆರೋಗ್ಯ ಸೇವೆ ದೊರೆಯಬೇಕು ಎನ್ನುವ ಉದ್ದೇಶದಿಂದ ದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ನಮ್ಮ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ ಎಂದು ಬಂದರು ಮೀನುಗಾರಿಕೆ , ಒಳನಾಡು, ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳದಲ್ಲಿ ಸರಕಾರದ ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರ ರಾಜ್ಯದಲ್ಲಿ ನಾನಾ ತಾಲೂಕುಗಳಲ್ಲಿ ಒಟ್ಟು 243 ನಮ್ಮ ಕ್ಲಿನಿಕ್ ಘಟಕಗಳನ್ನು ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಪೈಕಿ 114 ಘಟಕಗಳನ್ನು ಬುಧವಾರದಂದು ಏಕ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ|ಸುಧಾಕರ ಲೋಕಾರ್ಪಣೆ ಮಾಡಿದ್ದಾರೆ. ನಮ್ಮ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಹಾಗೂ ನೂತನ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಲಾಗಿದೆ ಎಂದು ಹೇಳಿದರು

Also Read  ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ


ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು, ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್, ಕಟ್ಟಡದ ಮಾಲಿಕ ರಾಮಚಂದ್ರ, ‘ನಮ್ಮ ಕ್ಲಿನಿಕ್‌’ನ ಪ್ರಭಾರ ವೈದ್ಯಾಧಿಕಾರಿ ಡಾ. ಸಂಜನಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಡಾ|ಅಮಿತ್ ಕುಮಾರ್ ಸ್ವಾಗತಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ರವಿಶಂಕರ್ ವಂದಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top