ಹೋಂಡಾ ಡಿಯೋ – ಲಾರಿ ಢಿಕ್ಕಿ ► ಗಾಯಗೊಂಡ ಡಿಯೋ‌ ಸವಾರ ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.23. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡಿನ ಫ್ಲೈ ಓವರ್ ಬಳಿ ಗುರುವಾರದಂದು ನಡೆದಿದೆ.

 

ಗಾಯಾಳು ದ್ವಿಚಕ್ರ ವಾಹನ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಬಿ.ಸಿ.ರೋಡಿನಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಘಟನೆ ಸಂಬಂಧ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top