ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ , ಡಿ 15 : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ.

ಮೃತಪಟ್ಟವರನ್ನು ಜಕ್ಕಹಳ್ಳಿ ಗ್ರಾಮದ ಚಂದ್ರು(32) ,ಲಕ್ಕೂರು ಗ್ರಾಮದ ಅನಿಲ್ (26) ಎಂದು ಗುರುತಿಸಲಾಗಿದೆ. ಬೈಕಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಮೈಸೂರಿನ  ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಬೈಕ್ ಸವಾರರು ಅತೀ ವೇಗದಿಂದ ಬಂದ ಪರಿಣಾಮ ಮುಖಾಮುಖಿ ಢಿಕ್ಕಿ ಸಂಛವಿಸಿದೆನ್ನಲಾಗಿದೆ. ಸ್ಥಳಕ್ಕೆ ಗುಂಡ್ಲು ಪೇಟೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top