ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                  

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 15. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.

ಶಿಕ್ಷಕ ಚಿನ್ಮಯ ಆನಂದ ಮೂರ್ತಿ ಎಂಬಾತ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದು, ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು, ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕನನ್ನು ವಜಾ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಕೆಡಿಪಿ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಿಇಒ ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Also Read  ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ”

 

 

error: Content is protected !!
Scroll to Top