ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 15. ಸ್ಕೂಟರ್‌ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಗಾಯಗೊಂಡ ಸ್ಕೂಟರಗ ಸವಾರನನ್ನು ಕಾಂತಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪುತ್ತೂರು ಸಂಚಾರ ಪೊಲೀಸರು ತನಿಖೆ ನಡೆಸಿದ್ದಾರೆ.

Also Read  ಜ. 17: ರಾಜ್ಯದಾದ್ಯಂತ ಪಲ್ಸ್ ಪೋಲಿಯೊ

error: Content is protected !!
Scroll to Top