ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು          

(ನ್ಯೂಸ್ ಕಡಬ) newskadaba.com  ಭಟ್ಕಳ, ಡಿ. 15. ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಮೂಡ್ ಭಟ್ಕಳ ಬೈಪಾಸ್ ಬಳಿ ಸಂಭವಿಸಿದೆ.

ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಮಂಜುನಾಥ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ನಗರದ ಹೋಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ.

Also Read  ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

 

.

 

 

error: Content is protected !!
Scroll to Top