ಮಾಜಿ ನಗರಸಭೆ ಅಧ್ಯಕ್ಷೆಯ ಪತಿಗೆ ಹಲ್ಲೆ ➤ ಆರೋಪಿ ಪೊಲೀಸ್ ವಶಕ್ಕೆ

Crime

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 15. ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಯೋರ್ವ ಅವರ ಪತಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುವಾರದಂದು ಬೆಳಗ್ಗೆ ಇಂದ್ರಾಳಿ ಸಮೀಪ ನಡೆದಿದೆ.

ಹಲ್ಲೆಗೊಳಗಾದವರನ್ನು ಕೃಷ್ಣನಾಯ್ಕ್ ಎಂದು ಗುರುತಿಸಲಾಗಿದೆ. ಆರೋಪಿ ಅರ್ಜುನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅರ್ಜುನ್ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top