ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ. 16. ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ಅಲ್ಪ ಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಸಂಗೀತ ಕುಟುಂಬದಿಂದ ಬಂದವರು, ಇವರ ತಂದೆ ಪಂಡಿತ್ ಬಿ. ಎನ್.ಪಾರ್ಥಸಾರಥಿ ನಾಯ್ಡ ಸಂಗೀತ ವಿದ್ವಾಂಸ. 70ರ ದಶಕದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟ ಮನೋರಂಜನ್, 800ಕ್ಕೂ ಹೆಚ್ಚು ಸಂಗೀತ ಆಲ್ಬಂ ರಚಿಸಿದ್ದಾರೆ.

‘ಕಂಡಕ್ಟರ್ ಕರಿಯಪ್ಪ’ ಧಾರಾವಾಹಿಯಲ್ಲಿ ನಟಿಸಿದ್ದ ಇವರು, ಹಿನ್ನಲೆ ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಕಾರ್ತಿಕ ದೀಪ ಸೇರಿದಂತೆ ಕೆಲವು ಧಾರಾವಾಹಿಗಳ ಶೀರ್ಷಿಕೆ ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

Also Read  ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ ಕಡಬ

error: Content is protected !!
Scroll to Top