ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 16. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66 ರ ಮೂಡ್ ಬೈಪಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ(30) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯಲು ಶಂಶುದ್ದೀನ್ ಸರ್ಕಲ್ ಗೆ ಹೋಗುತ್ತಿದ್ದ ವೇಳೆ ಈ ದುರ್ಘಟನ ನಡೆದಿದೆ. ಅಪಘಾತದ ತೀವ್ರತೆಗೆ ಲಾರಿ ಪಲ್ಟಿಯಾಗಿದೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

 

error: Content is protected !!
Scroll to Top