ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು          

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 16. 5 ವರ್ಷದ ಬಾಲಕನೋರ್ವನ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ.

ಮೃತ ಬಾಲಕನನ್ನು ಹೂಡ್ಕೋ ಬಡಾವಣೆಯ ಶ್ರೇಯಸ್ (5) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top