ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                        

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 16. ಚಿಕ್ಕಮಕ್ಕಳಿಂದ 18ನೇ ವಯೋಮಾನದವರೆಗಿನ ಮಕ್ಕಳನ್ನು ಕಾಡುವ ದಡಾರ –ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಸಾರ್ವಜನಿಕರು ಸಕಾಲದಲ್ಲಿ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ದಡಾರ-ರುಬೆಲ್ಲಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಲಸಿಕಾ ಅಭಿಯಾನ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಸಿಕೆಯನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಅಂಗನವಾಡಿಗಳಲ್ಲಿ, ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಪ್ರದೇಶದಲ್ಲಿರುವ ಒಂಬತ್ತು ತಿಂಗಳುಗಳಿಂದ 15ವರ್ಷದೊಳಗಿನ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರದಲ್ಲಿ ಹಾಗೂ ಶಾಲೆಗೆ ಹೋಗುವ ಮಕ್ಕಳಿಗೆ ಶಾಲೆಯಲ್ಲಿ ಲಸಿಕೆ ಹಾಕಲು ಅನುಮತಿ ನೀಡುವಂತೆ ಅವರು ಮನವಿ ಮಾಡಿದ ಅವರು ಇನ್ನಿತರ ಮಕ್ಕಳಿಗೂ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಸೂಚಿಸಿದರು. ಮಧ್ಯಮ ಮತ್ತು ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳಲ್ಲಿ ಈ ರೋಗವು ಮಾರಣಾಂತಿಕವಾಗಿದೆ ಎಂದು ಸೂಚಿಸಿದರು.

error: Content is protected !!

Join the Group

Join WhatsApp Group