ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಓರ್ವ ಮೃತಪಟ್ಟರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಪ್ರಕರಣ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ ಬಳಿ ನಡೆದಿದೆ.

ಮೃತಪಟ್ಟವರನ್ನು ವಾಸುದೇವ ಡಿ. ಸಾಲಿಯಾನ್ (65) ಹಾಗೂ ಗಾಯಾಳುವನ್ನು ಚಂದ್ರಶೇಖರ್(65) ಎಂದು ಗುರುತಿಸಲಾಗಿದೆ. ಪಡುಬಿದ್ರೆ ಬೀಚ್ ಬಳಿ ಅಡ್ಡಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಹೆಜ್ಜೇನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ದೂರು ಸಲ್ಲಿಸಿದ್ದಾರೆ.

Scroll to Top