ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ     

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 17. ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಯಜಮಾನ ಸೇರಿದಂತೆ ಒಂದೇ ಕುಟುಂಬದ ಆರು ಜನರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ.

ಮೃತಪಟ್ಟವರನ್ನು ಮನೆಯ ಯಜಮಾನ ಶಿವಯ್ಯ (50), ಪತ್ನಿ ಪದ್ಮಾ (45) ಹಾಗೂ ಇಬ್ಬರು ಮಕ್ಕಳು, ಪದ್ಮಾರವರ ಅಕ್ಕನ ಮಗಳು ಮೌನಿಕ ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಡರಾತ್ರಿ ಭೀಕರ ಅಗ್ನಿ ಅವಘಢ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಕುರಿತು ತನಿಖೆ ಮಾಡಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Also Read  ಫುಟ್ಬಾಲ್ ಪಂದ್ಯದ ವೇಳೆ ವಿವಾದ - ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

error: Content is protected !!
Scroll to Top