ರಾಜ್ಯದ 3 ಸಾವಿರ ಕಾಲೇಜುಗಳಲ್ಲಿ ಬಂದ್ ಗೆ ಕರೆ ➤ ವಿದ್ಯಾರ್ಥಿಗಳ ಬೇಡಿಕೆಗಳೇನು ???

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ಬಂದ್ ಕರೆ ನಡುವೆಯೂ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬೆಳಗ್ಗೆ ಕಾಲೇಜಿನಲ್ಲಿ ತರಗತಿಗಳು ಆರಂಭಗೊಂಡಿವೆ. ಹೀಗಾಗಿ ಎನ್​ಎಸ್​ಯುಐ ಕಾಲೇಜು ಒಳಗೆ ಪ್ರವೇಶಿಸಲು ಮುಂದಾಗಿದೆ.

ಇವತ್ತು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿದ್ದೇವೆ. ಯಾವುದೇ ಕಾರಣಕ್ಕೂ ಕಾಲೇಜು ಆರಂಭಗೊಳ್ಳಲು ಬಿಡಲ್ಲ. ಬಂದ್ ಗೆ ಸಹಕರಿಸಲು ಪ್ರಾಂಶುಪಾಲಾರ ಬಳಿ ಮನವಿ ಮಾಡಿಕೊಂಡಿದ್ದೇವೆ ಎಂದು NSUI ಹೇಳಿಕೊಂಡಿದೆ.

ವಿದ್ಯಾರ್ಥಿಗಳ ಸಮಸ್ಯೆ ಏನು?
– ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆ ಫಲಿತಾಂಶ ವಿಳಂಬ
– ರಾಷ್ಟ್ರೀಯ ಶಿಕ್ಷಣ ನೀತಿಯ ಅಸಂಘಟಿತ ಮತ್ತು ಅವೈಜ್ಞಾನಿಕ ಅನುಷ್ಠಾನ
– ವಿದ್ಯಾರ್ಥಿ ವೇತನ ಮಂಜೂರು ವಿಳಂಬ ಧೋರಣೆ
– ಬಸ್ ಸಾರಿಗೆ ಸಮಸ್ಯೆ
– ಸರ್ಕಾರಿ ಕಾಲೇಜು ಶುಲ್ಕ ಹೆಚ್ಚಳ

Also Read  ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

ವಿದ್ಯಾರ್ಥಿಗಳ ಬೇಡಿಕೆಗಳೇನು?
– ಸರಿಯಾದ ಸಮಯಕ್ಕೆ ಫಲಿತಾಂಶ ನೀಡಬೇಕು
– ವಿದ್ಯಾರ್ಥಿ ವೇತನ ಕೂಡಲೇ ಬಿಡುಗಡೆ ಮಾಡಬೇಕು
– ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು
– ಸರ್ಕಾರಿ ಕಾಲೇಜು ಶುಲ್ಕ ಕಡಿಮೆ ಮಾಡಬೇಕೆಂದು ಪಟ್ಟು

error: Content is protected !!
Scroll to Top