ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ದ್ವಿ ಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಬಳಿ ಸಂಭವಿಸಿದೆ.

ಮೃತರನ್ನು ದ್ವಿಚಕ್ರ ಸವಾರ ನಿಂಗಪ್ಪ (65) ಹಾಗೂ 9 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ತುರುವೇಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎನ್ನಲಾಗಿದೆ.

Scroll to Top