ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                            

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 17. ಜ್ವರದಿಂದ ಬಳಲುತ್ತಿದ್ದವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಮಾಡ್ನೂರು ಗ್ರಾಮದ ಕಾವು ನಿವಾಸಿ ಧರ್ಮಲಿಂಗಮ್ ಮತ್ತು ತಮಿಳ್ ಸೆಲ್ವಿ ದಂಪತಿಯ ಪುತ್ರಿ, 9ನೇ ತರಗತಿಯ ಅನುಶ್ರೀ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈಕೆ ಪುತ್ತೂರಿನ ಆಸ್ಪತ್ರೆಯೊಂದರಿಂದ ಔಷಧಿ ಪಡೆದಿದ್ದರು. ಆರೋಗ್ಯ ತೀರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Scroll to Top