ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮುದ್ದೇಬಿಹಾಳ, ಡಿ. 17. ನೀರು ಸಂಗ್ರಹಿಸುವ ಟ್ಯಾಂಕ್ ನೊಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಸಂಭವಿಸಿದೆ.

ಮೃತಪಟ್ಟ ಬಾಲಕನನ್ನು ಶ್ರೇಯಸ್ ಆನಂದ ನಿಡೋಣಿ (5) ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳ ತಾಲೂಕು ಆಡಳಿತ ಸೌಧ ಹಿಂಭಾಗದಲ್ಲಿರುವ ಕುಂಚಗನೂರ ದೇಸಾಯಿ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಟ್ಯಾಂಕ್ ನೊಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ

error: Content is protected !!
Scroll to Top