ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ.

ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ.

ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.

ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

 

 

 

Scroll to Top