ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..!



(ನ್ಯೂಸ್ ಕಡಬ) newskadaba.com  ನೆಲಮಂಗಲ , ಡಿ 18 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ನಡೆದಿದೆ ಎನ್ನಲಾಗಿದೆ.







ಮೃತಪಟ್ಟವರನ್ನು ಸಾಬುಲಾಲ್ (26) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ  ಕಾರೊಂದು  ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ ಡ್ರೈವರ್ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.






 

error: Content is protected !!
Scroll to Top