ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com  ಬಂಟ್ಟಾಳ , ಡಿ 18 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ . ನಷ್ಟ ಸಂಭವಿಸಿದ ಘಟನೆ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.

ದೇವಂದಬೆಟ್ಟು ಸುಂದರಿ,ಶುಭ ಆನಂದ ಬಂಜನ್ ಎಂಬುವವರಿಗೆ ಸೇರಿರುವ ಹಂಚಿನ ಹಳೆಯ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ, ಅಪಘಾತದಿಂದ  ಸುಮಾರು 6 ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Also Read  ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ  ➤ ಕಂದಾಯ ಸಚಿವ ಆರ್. ಅಶೋಕ್

error: Content is protected !!
Scroll to Top