ಝಿಕಾ ವೈರಸ್ ವಿರುದ್ದ ಹೋರಾಡಲು ಸೊಳ್ಳೆಗಳ ನಿರ್ಮೂಲನೆ-ತಜ್ಞರು                                                       

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.19   ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ಕೇಸ್ ಪತ್ತೆಯಾಗಿದ್ದು, ಝಿಕಾ ವಿರುದ್ಧ ಹೋರಾಡಲು ನಗರದಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವಂತೆ ಸಾರ್ವಜನಿಕರಿಗೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮಳೆಗಾಲವು ಏಳೆಂಟು ತಿಂಗಳ ಕಾಲ ವಿಸ್ತರಣೆಗೊಂಡಿರುವುದರಿಂದ ಈ ಸಂದರ್ಭದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ ಎಂದು ತಿಳಿದುಬಂದಿದೆ.

ಕೆಸಿ ಜನರಲ್ ಆಸ್ಪತ್ರೆಯ ಡಾ. ಲಕ್ಷ್ಮೀಪತಿ ಸುದ್ದೇಕುಂಟೆ ಮಾತನಾಡಿ, ಆರು ತಿಂಗಳಿನಿಂದ ಪ್ರತಿದಿನ ಎರಡರಿಂದ ಮೂರು ಪ್ರಕರಣಗಳು ಪತ್ತೆಯಾಗುತ್ತಿವೆ. ಝಿಕಾ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು, ಡೆಂಗ್ಯೂ-ಉಂಟುಮಾಡುವ ಸೊಳ್ಳೆಗಳಿಂದಲೂ ಹರಡುವ ಸಾಧ್ಯತೆಗಳಿವೆ. ಹೀಗಾಗಿ ನಗರದಲ್ಲಿ ಸೊಳ್ಳೆ ಉತ್ಪತ್ತಿಯಾಗುವ ಎಲ್ಲಾ ಸ್ಥಳಗಳನ್ನು ನಿರ್ಮೂಲನೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.

Also Read  ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ...!!!

 

 

error: Content is protected !!
Scroll to Top