(ನ್ಯೂಸ್ ಕಡಬ) newskadaba.com ಮಂಡ್ಯ , ಡಿ 19 : ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಲೋಕಸರ ಗ್ರಾಮದಲ್ಲಿ ವರದಿಯಾಗಿದೆ.
ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಗ್ರಾಮಸ್ಥರಿಗೆ ಆತಂಕ ಮೂಡಿತ್ತು. ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಜಮಾಯಿಸಿದ್ದರು ಎನ್ನಲಾಗಿದೆ.