ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂದು ತಿಳಿದು ಬಂದಿದೆ.

Also Read  ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್...?

error: Content is protected !!
Scroll to Top