(ನ್ಯೂಸ್ ಕಡಬ) newskadaba.com ಶೋಪಿಯಾನ್, ಡಿ. 20. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಯು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಘಟನೆ ವರದಿಯಾಗಿದೆ.
ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನಾಪಡೆಯು ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆಯು ಎನ್ಕೌಂಟರ್ ದಾಳಿ ನಡೆಸಿದೆ. ಹತ್ಯೆಯಾದ ಉಗ್ರರಿಂದ ಎಕೆ 47 ರೈಫಲ್, 2 ಪಿಸ್ತೂಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಕಾಶ್ಮೀರದ ಎಡಿಜಿಪಿ ಹೇಳಿದ್ದಾರೆ.