ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 20. ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯು ಟ್ವೀಟ್ ಮೂಲಕ ಬಿಗ್ ಶಾಕ್ ನೀಡಿದ್ದು, ಮಾರ್ಚ್ 31, 2023ರ ಒಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ಗೆ ಲಿಂಕ್ ಮಾಡಬೇಕು, ಇಲ್ಲದಿದ್ದಲ್ಲಿ ಏಪ್ರಿಲ್ 1, 2023 ರಂದು ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪ್ರಸ್ತುತ ದಿನಗಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಅದು ಇಲ್ಲದಿದ್ದರೆ ತೆರಿಗೆ ಇಲಾಖೆಯಲ್ಲಿ ಯಾವುದೇ ಕೆಲಸ ನಡೆಯುವುದಿಲ್ಲ. ಆದಾಯ ತೆರಿಗೆ ಇಲಾಖೆಯು ಪ್ಯಾನ್ ಸಂಖ್ಯೆಯಿಂದ ಮಾತ್ರ ನಿಮ್ಮ ಹಣಕಾಸಿನ ಮಾಹಿತಿಯನ್ನು ದಾಖಲಿಸುತ್ತದೆ. ಹೀಗಾಗಿ, ನೀವು ತಕ್ಷಣ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಜೊತೆ ಲಿಂಕ್ ಮಾಡಬೇಕು. ಆದಾಯ ತೆರಿಗೆ ಕಾಯ್ದೆ 1961ರ ಪ್ರಕಾರ, ವಿನಾಯಿತಿ ಪಡೆದ ವರ್ಗಕ್ಕೆ ಸೇರದ ಎಲ್ಲಾ ಪ್ಯಾನ್ ಕಾರ್ಡ್ ಹೊಂದಿರುವವರು ಮಾರ್ಚ್ 31, 2023 ರೊಳಗೆ ತಮ್ಮ ಪ್ಯಾನ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದೆ.

Also Read  ರಾಮ ಮಂದಿರ ನಿರ್ಮಾಣಕ್ಕೆ ಮೂರು ವರ್ಷ ➤ ಪೇಜಾವರ ಶ್ರಿ

 


ಪ್ಯಾನ್ ಜೊತೆ ಆಧಾರ್ ಜೊತೆ ಲಿಂಕ್ ಮಾಡುವುದು ಹೇಗೆ?

ನೀವು ಮನೆಯಲ್ಲಿಯೇ ಮಾಡುವುದಾದರೆ, ಮೊದಲು ನೀವು ಆದಾಯ ತೆರಿಗೆಯ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಿ, ಇಲ್ಲಿ ಒಂದು ಫಾರ್ಮ್ ತೆರೆಯುತ್ತದೆ. ಅದರಲ್ಲಿ ನೀವು ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಅದರ ನಂತರ ಆಧಾರ್ ಕಾರ್ಡ್‌ನ ಡೇಟಾದ ಪ್ರಕಾರ ಮಾಹಿತಿಯನ್ನು ನಮೂದಿಸಬೇಕಾಗುತ್ತದೆ. ಸ್ವಂತ ಹೆಸರು, ಹುಟ್ಟಿದ ದಿನಾಂಕ ಹಾಗೆ ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕವನ್ನು ಮಾತ್ರ ಬರೆದಿದ್ದರೆ, ನೀವು ಅಲ್ಲಿರುವ ಬಾಕ್ಸ್‌ನಲ್ಲಿ ಸರಿಯಾದ ಗುರುತು ಹಾಕಬೇಕು. ಇದರ ನಂತರ ಪರಿಶೀಲಿಸಲು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ. ಈಗ ನೀವು “ಲಿಂಕ್ ಆಧಾರ್” ಬರೆದಿರುವುದನ್ನು ನೋಡುತ್ತೀರಿ. ಅಲ್ಲಿ ಕ್ಲಿಕ್ ಮಾಡಿ. ಈ ಮೂಲಕ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು.

Also Read  ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ➤ ಆರೋಪಿಗಳ ಬಂಧನ

error: Content is protected !!
Scroll to Top