ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್ , ಡಿ 20 :  ಮಾರುಕಟ್ಟೆಯೊಂದರಲ್ಲಿ ಸ್ಫೋಟ ಸಂಭವಿಸಿ ಸುಮಾರು 13 ಮಂದಿ ಗಾಯಗೊಂಡಿರುವ ಘಟನೆ  ಬಲೂಚಿಸ್ತಾನ್ ಪ್ರಾಂತ್ಯದ ಖುಸ್ದಾರ್ ಜಿಲ್ಲೆಯಲ್ಲಿ ವರದಿಯಾಗಿದೆ.

ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಸೈಕಲ್ ಗೆ ಸ್ಪೋಟಕಗಳನ್ನು ಅಳವಡಿಸಲಾಗಿದ್ದು, ರಿಮೋಟ್  ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಅ ಪ್ರದೇಶದ ಸುತ್ತ ಮುತ್ತ ಕಡಿಮೆ ಜನರಿದ್ದರಿಂದ ಹಾಗೂ ಅಂಗಡಿಗಳು ಮುಚ್ಚಲ್ಪಟ್ಟಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹಾಗೂ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Also Read  ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ

error: Content is protected !!
Scroll to Top