ಕುಸಿದು ಬಿದ್ದು ಚಾಲಕ ಮೃತ್ಯು!

(ನ್ಯೂಸ್ ಕಡಬ) newskadaba.com  ಸೋಮವಾರಪೇಟೆ  , ಡಿ 20 :  ಟ್ಯಾಕ್ಸಿ ಚಾಲಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಆಯತಾನ ರೆಸಾರ್ಟ್ ಬಳಿ ಸಂಭವಿಸಿದೆ.

ಮೃತರನ್ನು ಈರಣ್ಣ (36) ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ನಿವಾಸಿ, ಸ್ನಾನ ಮುಗಿಸಿ ಹೊರಬಂದು ಕೊಠಡಿಯಲ್ಲಿ ಕುಳಿತಿದ್ದ ಸಂದರ್ಭ ದಿಢೀರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಪತ್ನಿ ಸೇರಿದಂತೆ ಎರಡು ವರ್ಷದ ಮಗುವನ್ನು ಅಗಲಿದ್ದಾರೆ.

Also Read  ಹಳೆ ಪಿಂಚಣಿ ಯೋಜನೆ ಜಾರಿಯ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

error: Content is protected !!
Scroll to Top