ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!         

(ನ್ಯೂಸ್ ಕಡಬ) newskadaba.com  ಕೊಪ್ಪಳ, ಡಿ.20  ದೋಷಪೂರಿತ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿಯ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದೆ.

ಊಟ ಮಾಡಿದ್ದ ಕೆಲವರು ನಿತ್ರಾಣರಾಗಿದ್ದು, ವಾಂತಿಯಾಗಿ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ.

ಕೆಲವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ, ಇನ್ನೂ ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

 

Scroll to Top