ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!  

(ನ್ಯೂಸ್ ಕಡಬ) newskadaba.com  ವಿಜಯಪುರ, ಡಿ.20 ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾದ ಘಟನೆ ವಿಜಯಪುರ ನಗರದ ದೇವಗಿರಿ ಎಂಬಲ್ಲಿ ಸಂಭವಿಸಿದೆ.

ಸ್ಮಶಾನದ ಬಾವಿಯಲ್ಲಿನ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದ್ದು, ಪಾಪಿಗಳು ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಬಾವಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಹೆಣ್ಣು ಮಗುವಾಗಿದೆ ಎಂಬ ಕಾರಣಕ್ಕೆ ಯಾರು ಬಾವಿಯಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

Also Read  ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆಯ ಆರೋಪ ➤ ಹಿಂದೂ ಸಂಘಟನೆಯಿಂದ ಕಡಬ ಪೊಲೀಸರಿಗೆ ದೂರು

 

 

error: Content is protected !!
Scroll to Top