ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                      

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 21. ಬೈಕ್ ಮತ್ತು ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದ ಬಳಿ ಸಂಭವಿಸಿದೆ.

ಮೃತರನ್ನು ಬಾಬುಜಿ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

Scroll to Top